ಮಡಂತ್ಯಾರು, ಮಾಲಾಡಿ, ಪುಂಜಾಲಕಟ್ಟೆ ವ್ಯಾಪ್ತಿಯ ವರ್ತಕರ ಸಂಘದ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸೀಲ್‌ಡೌನ್ ಮುಗಿಯುವವರೆಗೆ ಕೋವಿಡ್ ಮುಂಜಾಗ್ರತಾ ನಿಯಮಗಳ ಪಾಲನೆಯೊಂದಿಗೆ ವ್ಯಾಪಾರ ವಹಿವಾಟು ನಡೆಸುವಂತೆ ಸಭೆಯಲ್ಲಿ ನಿರ್ಧಾರ


ಮಡಂತ್ಯಾರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಈ ಪ್ರಯುಕ್ತ ಮಾಲಾಡಿ, ಮಡಂತ್ಯಾರು, ಪುಂಜಾಲಕಟ್ಟೆ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ವರ್ತಕರ ಸಂಘದ ಸಮಾಲೋಚನಾ ಸಭೆ ಜೂ.14 ರಂದು ಮಡಂತ್ಯಾರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ಮಾಲಾಡಿ ಮತ್ತು ಮಡಂತ್ಯಾರು ವ್ಯಾಪ್ತಿಯಲ್ಲಿರುವವರಿಗೆ ಮಡಂತ್ಯಾರು ಪೇಟೆಯೇ ಪ್ರಮುಖವಾಗಿರುವ ಕಾರಣ ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೀಲ್‌ಡೌನ್ ಮುಗಿಯುವವರಿಗೆ ವರ್ತಕರು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವುದರೊಂದಿಗೆ ವ್ಯವಹಾರ ನಡೆಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಮಡಂತ್ಯಾರು ಗ್ರಾ.ಪಂ.ಅಧ್ಯಕ್ಷೆ ಶಶಿಪ್ರಭಾ, ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಲಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ ಸುಸ್ಸಾನ, ಉಪಾಧ್ಯಕ್ಷ ದಿನೇಶ್ ಕರ್ಕೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಮಡಂತ್ಯಾರು ಗ್ರಾ.ಪಂ. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿ’ಸೋಜಾ, ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿ, ಗ್ರಾ.ಪಂ ಸದಸ್ಯರು, ವರ್ತಕರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ಕೊರೊನಾ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.