ಬೆಲೆ ಏರಿಕೆಯನ್ನು ವಿರೋಧಿಸಿ ಕುಕ್ಕೇಡಿ-ನಿಟ್ಟಡೆ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುಕ್ಕೇಡಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕುಕ್ಕೇಡಿ-ನಿಟ್ಟಡೆ ಗ್ರಾಮ ಸಮಿತಿಯ ವತಿಯಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪಿಕಪ್ ವಾಹನವನ್ನು ಹಗ್ಗ ಕಟ್ಟಿ ಎಳೆಯುವುದರ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ ರೀತಿಯಲ್ಲಿ  ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ರವರು ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾನಾಡಿದರು.

ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಕುಕ್ಕೇಡಿ ಗ್ರಾ.ಪಂ ಸದಸ್ಯರುಗಳಾದ ಗುಣವತಿ ಡಿ, ತೇಜಾಕ್ಷಿ, ರಜನಿ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಗ್ರಾಮ ಸಮಿತಿ ಅಧ್ಯಕ್ಷ ಸ್ಟೀವನ್ ಮೋನಿಸ್, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.