ನಾರಾವಿ ಗ್ರಾ.ಪಂ: ಜೂ.16ರಿಂದ 21 ರವರೆಗೆ ಸಂಪೂರ್ಣವಾಗಿ ಸೀಲ್‌ಡೌನ್ ಜಾರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಜೂ.15 ರಂದು ಬೆಳಿಗ್ಗೆ 6ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ನಾರಾವಿ: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾರಾವಿ ಗ್ರಾಮ ಪಂವಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಸೀಲ್‌ಡೌನ್ ಮಾಡುವಂತೆ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಈ ಪ್ರಯುಕ್ತ ಸೋಂಕು ಹರಡುವುದನ್ನು ನಿಯಂತ್ರಣಗೊಳಿಸುವ ಉದ್ದೇಶದಿಂದ ನಾರಾವಾ ಗ್ರಾಮ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆಯು ಜೂ. 14 ರಂದು ನಡೆಯಿತು.

ಜೂ.16 ರಿಂದ 21ರವರೆಗೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಸೀಲ್ ಡೌನ್ ಜಾರಿಗೊಳಿಸಲಾಗಿದ್ದು, ಜೂ.15 ರಂದು ಬೆಳಿಗ್ಗೆ 6 ರಿಂದ 9 ರವರೆಗೆ ಅಗತ್ಯ ದಿನಸಿ ವಸ್ತುಗಳ ಖರೀದಿ ಮತ್ತು ಪಡಿತರ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಸೀಲ್ಡೌನ್ ಸಂದರ್ಭದಲ್ಲಿ ಜನರಿಗೆ ಇನ್ಯಾವುದೇ ವ್ಯವಹಾರಕ್ಕೆ ಅವಕಾಶ ಇರುವುದಿಲ್ಲ ಮತ್ತು ಜನರು ಅನಗತ್ಯವಾಗಿ ತಿರುಗಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತುರ್ತು ಸಮಸ್ಯೆಗಳು ಎದುರಾದಲ್ಲಿ ಕೋವಿಡ್ ಕಾರ್ಯಪಡೆ ಹಾಗೂ ಗ್ರಾಮ ಪಂಚಾಯತ್ ಕೋವಿಡ್ ಹೆಲ್ಪ್ ಲೈನ್ ಸೆಂಟರ್ ನಂಬರ್ :7760301540 ಸಂಪರ್ಕಿಸಬಹುದು ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಜೂ.21ರ ಒಳಗಾಗಿ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಅಂಗಡಿ ಮಳಿಗೆಗಳ ಮಾಲಕರು, ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳು, ಬ್ಯಾಂಕ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಗೂ ಇತರರು ಎಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ನಡೆಸಿ, ಅದರ ವರದಿಯನ್ನು ತೋರಿಸಿದ ನಂತರವೇ ಕಾರ್ಯನಿರ್ವಹಿಸಲು ಅವಕಾಶ ನೀಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ದೀಕ್ಷಿತಾ, ಆರೋಗ್ಯ ಸಹಾಯಕಿ ಗೋಪಿ, ಪೊಲೀಸ್ ಸಿಬ್ಬಂದಿ ರಾಜೇಶ್, ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಹಾಲು ಉತ್ಪದಕರ ಸಹಕಾರ ಸಂಘದ ಅಧ್ಯಕ್ಷ ಶೇಖರ್ ಹೆಗ್ಡೆ ಮತ್ತು ಗ್ರಾ.ಪಂ. ಸದಸ್ಯರು ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.