ಮಡಂತ್ಯಾರು: ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು:  ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ದರ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಡಂತ್ಯಾರು, ಪಾರೆಂಕಿ ಹಾಗೂ ಮಾಲಾಡಿ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಮಡಂತ್ಯಾರು ಬಸವನಗುಡಿ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಜೂ.14ರಂದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ)ಅಧ್ಯಕ್ಷ  ರಂಜನ್ ಜಿ. ಗೌಡ ದರ ಹೆಚ್ಚಳದ ಜನ ವಿರೋಧಿ ನೀತಿ ನಡೆಯನ್ನು ಪ್ರದರ್ಶಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಶೈಲೇಶ್ ಕುಮಾರ್, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಕುಮಾರ್, ತಾ.ಪಂ ಮಾಜಿ ಸದಸ್ಯ ವಿನ್ಸೆಂಟ್ ಡಿ’ಸೋಜಾ, ಜೆರಾಲ್ಡ್ ಕೊರೆಯ, ಮಾಲಾಡಿ ಗ್ರಾ.ಪಂ ಸದಸ್ಯಯರಾದ ಉಮೇಶ್ ಮತ್ತು ಬೆನಡಿಕ್ಟ ಮಿರಾಂದ ಪುರಿಯ, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ, ಕುಕ್ಕಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ಲಾ ಪಿ. ಮಾಲಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ಅಲ್ಪಾ ಸಂಖ್ಯಾತ ಗ್ರಾಮ ಸಮಿತಿ ಅಧ್ಯಕ್ಷ ಶಬ್ಬಿರ್ ಮಾಲಾಡಿ, ಸರಿತಾ ಡಿಸೋಜ ಪಾರೆಂಕಿ, ವಸಂತಿ ಜೆ. ಆಚಾರ್ಯ ಅರ್ತಿಲ, ಹೈದಾರ್ ಆಲಿ, ಜಲೀಲ್ ಆಶ್ರಪ್ ಹುಪ್ಪ, ವಲ್ಲೇರಿಯನ್ ಪಾರೆಂಕಿ, ಮುಸ್ತಾಪ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.