ಧರ್ಮಸ್ಥಳ ಗ್ರಾಮ ಪಂಚಾಯತ್ ಕೋವಿಡ್ ವಿಶೇಷ ಸಭೆ: ಜಿಲ್ಲೆಗೆ ಆಗಮಿಸುವ ಯಾತ್ರಿಕರಿಗೆ ತಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಆಡಳಿತ  ಹಾಗೂ ಧರ್ಮಸ್ಥಳ ಗ್ರಾಮ ಕಾರ್ಯಪಡೆ ಸಮಿತಿ ಸಭೆಯು ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜೂ.19ರಂದು ನಡೆಯಿತು.

ಬೇರೆ ಬೇರೆ ಜಿಲ್ಲೆಯಿಂದ ಆಗಮಿಸುವ ಯಾತ್ರಾರ್ಥಿಗಳು ಹಾಗೂ ಜನರನ್ನು ತಡೆಯುವ ನಿಟ್ಟಿನಲ್ಲಿ ಚಾರ್ಮಾಡಿ, ಕೊಕ್ಕಡ, ಬೆಳ್ತಂಗಡಿ, ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮಾನ್ಯ ತಹಸಿಲ್ದಾರ್ ಮಹೇಶ್ ಜೆ. ಇವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು,  ಲಾಕ್ ಡೌನ್ ಮುಗಿಯುವ ತನಕ ಹರಿಕೆ ಮಂಡೆಯನ್ನು ತೆರೆಯದಂತೆ ಟೆಂಡರ್ ದಾರರಿಗೆ ತಾಲೂಕು ಆಡಳಿತದಿಂದ ಸೂಚಿಸಿದೆ.

ಈ ಬಗ್ಗೆ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತ ಗ್ರಾಮ ಪಂಚಾಯಿತು, ಪೊಲೀಸ್ ಇಲಾಖೆ, ಒಟ್ಟು ಸೇರಿ ಒಮ್ಮತದಿಂದ ಕೆಲಸ ನಿರ್ವಹಿಸಲು ತೀರ್ಮಾನಿಸಿದ್ದು, ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಧರ್ಮಸ್ಥಳ ಪೊಲೀಸ್ ನಿರೀಕ್ಷಕ ಚಂದ್ರಶೇಖರ್, ಗ್ರಾಮಕರಣಿಕರಾದ ಪ್ರದೀಪ್ , ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಗೌಡ, ರವಿಕುಮಾರ್, ಹರೀಶ್ ಸುವರ್ಣ, ಹರ್ಷಿತ್ ಜೈನ್, ದಿನೇಶ್ ರಾವ್, ಗ್ರಾಮ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದರು.

ಡಾ.ದೇವಿಪ್ರಸಾದ್ ಬೊಳ್ಮ ಸ್ವಾಗತಿಸಿ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.