ಲಾಯಿಲದಲ್ಲಿ ಯಕ್ಷಗಾನ ಸಪ್ತಾಹ-ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಲಾಯಿಲ:  ಇಲ್ಲಿನ ಸುಬ್ರಮಣ್ಯ ಸಭಾ ಮಂದಿರಲ್ಲಿ ಸೀಲ್ ಡೌನ್ ನಿಯಮ ಜಾರಿಯಲ್ಲಿದ್ದರೂ ಯಕ್ಷಾವತರಣ ತಾಳ ಮದ್ದಳೆ ಕಾರ್ಯಕ್ರಮವನ್ನು ನಡೆಸಿದ ಬಗ್ಗೆ ಕಾರ್ಯಕ್ರಮದ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಾಕವಾಗಿ ಚರ್ಚೆಗೆ ಕಾರಣವಾಗಿದೆ.

 ಕುರಿಯ ವಿಠಲ ಶಾಸ್ತ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಮತ್ತು ಬೆಳ್ತಂಗಡಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಸಹಯೋಗದೊಂದಿಗೆ ನೇರಪ್ರಸಾರದಲ್ಲಿ ಬಿತ್ತರಗೊಳ್ಳುತ್ತಿರುವ 9 ದಿನಗಳ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಇಲ್ಲಿನ ಸುಬ್ರಮಣ್ಯ ಸಭಾ ಮಂದಿರಲ್ಲಿ ಜೂ.18ರಿಂದ ಆರಂಭಗೊಂಡಿದೆ.  ಈ ಹಿನ್ನಲೆಯಲ್ಲಿ ಸೀಲ್ ಡೌನ್ ನಿಯಮ ಜಾರಿಯಲ್ಲಿದ್ದರೂ ಯಕ್ಷಾವತರಣ ತಾಳ ಮದ್ದಳೆ ಕಾರ್ಯಕ್ರಮವನ್ನು ನಡೆಸಿರುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ.

ಈ ಬಗ್ಗೆ ಕಾರ್ಯಕ್ರಮ ಆಯೋಜಕ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಸ್ಪಷ್ಟನೆ ನೀಡಿದ್ದು, ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದುಕೊಂಡು ಕಾರ್ಯಕ್ರಮ ನಡೆಸಿದ್ದೇವೆ. ಕೇವಲ ಕಲಾವಿದರು ಮಾತ್ರ ಉಪಸ್ಥಿತರಿದ್ದರು. ನೇರ ಪ್ರಸಾರದ ಮೂಲಕ ನಡೆದ ಕಾರ್ಯಕ್ರಮವಾಗಿದ್ದು, ಕಾನೂನು ಬದ್ಧವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಪಂಚಾಯತ್ ಪಿಡಿಒ ಅವರು ಕೂಡ ಪ್ರೇಕ್ಷಕರಿಲ್ಲದೇ ಸಾಮಾಜಿಕ ಅಂತರ ಮತ್ತು ಅನುಮತಿ ಪಡೆದುಕೊಂಡಿದ್ದಾರೆ ಎಂದು ಸ್ಪಷ್ಟಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.