ಶಿಶಿಲ ಕ್ಷೇತ್ರದಲ್ಲೂ ಪರವೂರುಗಳಿಂದ ಆಗಮಿಸುತ್ತಿರುವ ಯಾತ್ರಾರ್ಥಿಗಳು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಜೂ.೨೧ರ ತನಕ ಕೊರೋನಾ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಆದರೆ ಬೆಂಗಳೂರು ಸೇರಿದಂತೆ ಇತರ ಪ್ರದೇಶಗಳಿಂದ ತಾಲೂಕಿನ ಶಿಶಿಲ ಸೇರಿದಂತೆ ವಿವಿಧ ಪುಣ್ಯ ಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ತಾಲೂಕು ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವುಗೊಂಡಿದೆ. ಆದರೆ ದ.ಕ ಜಿಲ್ಲೆಯಲ್ಲಿ ಇನ್ನೂ ಮುಂದುವರಿದಿದೆ. ಈ ಜಿಲ್ಲೆಯಲ್ಲಿ ಕೊರೋನಾ ಸೋಂಕು ಇನ್ನೂ ಕಡಿಮೆಯಾಗಿಲ್ಲ. ಇದರಿಂದಾಗಿ ಜೂ.21ರವರಗೆ ಲಾಕ್‌ಡೌನ್ ಜಾರಿಯಲ್ಲಿದ್ದು, ಇದು ಮುಂದುವರಿಯೂವ ಸಾಧ್ಯತೆಗಳು ಕಂಡು ಬಂದಿದೆ.

ಆದರೆ ಇತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವುಗೊಂಡಿರುವುದರಿಂದ ಇದರ ಮಾಹಿತಿ ಇಲ್ಲದೆ ದೂರದ ಊರುಗಳಿಂದ ತಾಲೂಕಿನ ಶಿಶಿಲ ಸೇರಿದಂತೆ ಇತರ ಪುಣ್ಯ ಕ್ಷೇತ್ರಗಳಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮತ್ಸ್ಯತೀರ್ಥ ಕ್ಷೇತ್ರವೆಂದು ಪ್ರಖ್ಯಾತವಾದ ಶಿಶಿಲ ಕ್ಷೇತ್ರಕ್ಕೂ ದೂರದ ಊರುಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.