ಧರ್ಮಸ್ಥಳ: ಕೊರೊನಾ ಸೋಂಕಿತರಿಗೆ ಕಾಯಕಲ್ಪ: ಮರಳಿ ಪಡೆದ ಆರೋಗ್ಯ ಭಾಗ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಕೈ ಜೋಡಿಸಿದ್ದು,  ಇಲ್ಲಿಯವರೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅನೇಕ ಸೇವಾಕಾರ್ಯಗಳು ನಡೆದಿವೆ.

ಇದೀಗ  ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸೋಂಕಿತರಿಗೆ  ಕೊರೊನಾ ಆರೈಕೆ ಕೇಂದ್ರವನ್ನು ಪ್ರಾರಂಭಿಸಿ, ಸೋಂಕಿತರಲ್ಲಿ ಭಯ-ಆತಂಕ ನಿವಾರಿಸಿ, ಎಲ್ಲರೂ ಸಂಪೂರ್ಣ ಗುಣಮುಖರಾಗಿ ಆರೋಗ್ಯ ಭಾಗ್ಯವನ್ನು ಹೊಂದಿದ್ದು ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಧರ್ಮಸ್ಥಳದ ರಜತಾದ್ರಿ ವಸತಿ ಗೃಹದಲ್ಲಿರುವ ಕೊರೊನಾ ಆರೈಕೆ ಕೇಂದ್ರ. ಇಲ್ಲಿಯ 300 ಕೊಠಡಿಗಳನ್ನು ಸೋಂಕಿತರ ಆರೈಕೆಗೆ ಮೀಸಲಿಟ್ಟಿದ್ದು,  600 ಹಾಸಿಗೆ ಗಳಿರುವ ವಸತಿಗೃಹವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೊರೊನಾ ಆರೈಕೆ ಕೇಂದ್ರಕ್ಕಾಗಿ ಉಚಿತವಾಗಿ ನೀಡಿದ್ದಾರೆ.

ನೆರಿಯಾ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕೊರೊನಾ ಸೋಂಕಿತರಾದ 120 ಪುರುಷರು ಹಾಗೂ 86 ಮಹಿಳೆಯರು ಸೇರಿದಂತೆ ಒಟ್ಟು  206 ಮಂದಿ ಧರ್ಮಸ್ಥಳದಲ್ಲಿ ಕೊರೊನಾ ಆರೈಕೆ ಕೇಂದ್ರದಲ್ಲಿ ಶುಶ್ರೂಷೆ ಪಡೆದು ಸಂಪೂರ್ಣ ಗುಣಮುಖರಾಗಿ ನವಚೈತನ್ಯ ದೊಂದಿಗೆ ಜೂ.20ರಂದು ಮರಳಿ ಸಿಯೋನ್ ಆಶ್ರಮಕ್ಕೆ ತೆರಳಲಿದ್ದಾರೆ.

206 ಮಂದಿ ಸೋಂಕಿತರಲ್ಲಿ 10 ಮಂದಿ ವಿಕಲ ಚೇತನರು, 30 ಮಂದಿ ಎಪ್ಪತ್ತು ವರ್ಷಕ್ಕೂ ಮಿಕ್ಕಿದ ಹಿರಿಯ ನಾಗರಿಕರು ಹಾಗೂ ಕೆಲವರು ಬುದ್ಧಿಮಾಂದ್ಯರೂ ಇದ್ದಾರೆ.

ಕೇಂದ್ರದಲ್ಲಿರುವ ವೈದ್ಯರು, ದಾದಿಯರು, ನೌಕರರು, ಸ್ವಯಂಸೇವಕರು ಹಾಗೂ ಸಿಬ್ಬಂದಿಯ ನಗುಮೊಗದ ಸೌಜನ್ಯ ಪೂರ್ಣ ಸೇವೆಯಿಂದ ಸೋಂಕಿತರಲ್ಲಿನ ಭಯ ಆತಂಕ ನಿವಾರಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.