ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗಳಿಗೆ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗಳಿಗೆ ನೂತನ ಸಬ್ ಇನ್ಸ್‌ಪೆಕ್ಟರ್‌ಗಳನ್ನು ನೇಮಕಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ. (ಐಪಿಎಸ್) ಅವರು ಜು.15 ರಂದು ಆದೇಶ ನೀಡಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ಈ ಹಿಂದೆ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಪವನ್ ನಾಯಕ್ ರವರು ವರ್ಗಾವಣೆಗೊಂಡಿದ್ದು, ಅವರ ತೆರವಾದ ಸ್ಥಾನಕ್ಕೆ ವೇಣೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತರಬೇತಿಯಲ್ಲಿದ್ದ (ಪ್ರೊಬೆಷನರಿ) ಸಬ್‌ಇನ್ಸ್‌ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್‌ರವರು ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ಠಾಣೆಯಲ್ಲಿ ಈಗಾಗಲೇ ಸಬ್ ಇನ್ಸ್‌ಪೆಕ್ಟರ್ ಆಗಿ ನಂದಕುಮಾರ್ ಎಂ.ಎಂ. ರವರು ಕಾರ್ಯನಿರ್ವಹಿಸುತ್ತಿದ್ದು, ಇದೇ ಠಾಣೆಯ ಕ್ರೈಮ್ ವಿಭಾಗಕ್ಕೆ ಸಬ್‌ಇನ್ಸ್‌ಪೆಕ್ಟರ್ ಆಗಿ ಸಂದೀಪ್ ಕುಮಾರ್ ಶೆಟ್ಟಿಯವರನ್ನು ನೇಮಕಗೊಳಿಸಿ ಐಜಿಪಿ ದೇವಜ್ಯೋತಿಯವರು ಆದೇಶ ಹೊರಡಿಸಿದ್ದಾರೆ.

ಎಸ್.ಐ ಸಂದೀಪ್ ಕುಮಾರ್ ಶೆಟ್ಟಿ ಯವರು ಈ ಹಿಂದೆ ಬೆಳ್ತಂಗಡಿ ಠಾಣೆಯ ಪ್ರೊಬೆಷನರಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.