ಧರ್ಮಸ್ಥಳ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆಗಿ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅಧಿಕಾರ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಪವನ್ ನಾಯಕ್ ರವರು ವರ್ಗಾವಣೆಗೊಂಡಿದ್ದು, ಅವರ ತೆರವಾದ ಸ್ಥಾನಕ್ಕೆ ವೇಣೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತರಬೇತಿಯಲ್ಲಿದ್ದ (ಪ್ರೊಬೆಷನರಿ) ಸಬ್‌ಇನ್ಸ್‌ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್‌ರವರು ಜು.16 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಮೂಲತಃ ಬಾಗಲಕೋಟೆಯ ಜಮಖಂಡಿಯವರಾದ ಇವರು ಈ ಹಿಂದೆ ವೇಣೂರು, ಬಂಟ್ವಾಳ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಇವರು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಎಸ್.ಐ ಚಂದ್ರಶೇಖರ್, ಸಿಬ್ಬಂದಿಗಳಾದ ವಿಶ್ವನಾಥ , ರವೀಂದ್ರ, ರಾಹುಲ್ ರಾವ್, ಕೃಷ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.