ಮಚ್ಚಿನದಲ್ಲಿ ಒಂದು ದಿನದ ಅಂತರದಲ್ಲಿ ಪತಿ-ಪತ್ನಿ ಆತ್ಮಹತ್ಯೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ: ಪತ್ನಿ ಆತ್ಮಹತ್ಯೆ ಮಾಡಿಕೊಂಡು ಆಕೆಯ ಅಂತ್ಯಸಂಸ್ಕಾರಕ್ಕೆಂದು ಕಟ್ಟಿದ್ದ ಶಾಮಿಯಾನದ ಪೈಪಿಗೆ ಪತಿ ನೇಣು ಹಾಕಿಕೊಂಡು ತಾನೂ ಆತ್ಮಹತ್ಯೆ ಮಾಡಿದ ಘಟನೆ ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ನಡೆದಿದೆ.

ಪತ್ನಿ ಚಂದ್ರಾವತಿ (49.ವ) ಅವರು ಹುಲ್ಲು ತರಲೆಂದು ಮನೆಯಿಂದ ಹೊರಗೆ ಹೋದವರು ಪಕ್ಕದ ಗೇರುಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮರುದಿನ ಅವರ ಪತಿ ಶಿವಪ್ಪ    ಮೂಲ್ಯ  (56ವ.) ಪತ್ನಿಯ ಶವ ಸಂಸ್ಕಾರಕ್ಕಾಗಿ ಹಾಕಲಾಗಿದ್ದ ಶಾಮಿಯಾನದ ಕಂಬಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು.
ಪತಿಗೆ ವಾಸಿಯಾಗದ ದೀರ್ಘ ಕಾಲದ ಅಸೌಖ್ಯ ಮತ್ತು ಮಕ್ಕಳಾಗದೇ ಇರುವ ಬಗ್ಗೆ ಮಾನಸಿಕವಾಗಿ ನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಈ ಕೃತ್ಯ ಎಸಗಿದರೆನ್ನಲಾಗಿದೆ.
ದಂಪತಿಯು ಮುಡಿಪಿರೆ ಎಂಬಲ್ಲಿ ತಾಯಿ
ನಾಗಮ್ಮರೊಂದಿಗೆ ವಾಸ್ತವ್ಯವಿದ್ದರು. ಇದೀಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಒಬ್ಬಂಟಿಯಾಗಿದ್ದಾರೆ. ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾನೂನಿನ ಪ್ರಕ್ರಿಯೆ ನಡೆದಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.