ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ಪ್ರಥಮ ದಿನದ ಪರೀಕ್ಷೆ ಯಶಸ್ವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಒಟ್ಟು 4242 ವಿದ್ಯಾರ್ಥಿಗಳ ಪೈಕಿ ಓರ್ವ ಗೈರು, 3 ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಬೆಳ್ತಂಗಡಿ: ಕೋವಿಡ್ ಮುಂಜಾಗ್ರತಾ ಕ್ರಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಕೋರ್ ಸಬ್ಜೆಕ್ಟ್ ಮೂರು ವಿಷಯಗಳಿಗೆ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜು.19ರಂದು ಪರೀಕ್ಷೆ ನಡೆದಿದ್ದು, ತಾಲೂಕಿನಲ್ಲಿ ಒಟ್ಟು 4241ವಿದ್ಯಾರ್ಥಿಗಳ ಪೈಕಿ ಒಬ್ಬರು ಪರೀಕ್ಷೆಗೆ ಗೈರು ಹಾಜರಾಗಿದ್ದರು.
ತಾಲೂಕಿನಲ್ಲಿ ಕೋವಿಡ್ ಧೃಢಪಟ್ಟಿದ್ದ ಮೂವರು ವಿದ್ಯಾರ್ಥಿಗಳು ಕೋವಿಡ್ ವಿಶೇಷ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ವಿದ್ಯಾರ್ಥಿಗಳು ಹೋಂ ಕ್ವಾರೆಂಟೈನ್‌ನಲ್ಲಿದ್ದು, ಇವರನ್ನು ಅವರ ಮನೆಗಳಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಂಬುಲೆನ್ಸ್ ಮುಖಾಂತರ ಕರೆತಂದು ಪರೀಕ್ಷೆ ಬರೆದ ಬಳಿಕ ಆಂಬುಲೆನ್ಸ್ ಮೂಲಕವೇ ಮನೆಗಳಿಗೆ ಮರಳಿ ಬಿಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮಾತ್ರವಲ್ಲದೇ ಪರೀಕ್ಷಾ ಕೇಂದ್ರದಲ್ಲೂ ಸಹ ಶಿಕ್ಷಕರ ಬದಲಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳೇ ಸೂಪರ್‌ವಿಶನ್ ಕರ್ತವ್ಯವನ್ನು ನಿರ್ವಹಿಸಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸಹ ಸ್ಯಾನಿಟೈಸೇಷನ್ ಮಾಡುವ ಮೂಲಕ ಪರೀಕ್ಷೆ ಬರೆಯುವ ಮಕ್ಕಳ ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಲಾಗಿತ್ತು.
ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ದೈಹಿಕ ಶಿಕ್ಷಕರು ಹಾಗೂ ಸ್ಕೌಟ್ಸ್ & ಗೈಡ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಿದ್ದರು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ ಹಾಗೂ ರೋಟರಿ ಸಂಸ್ಥೆಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಗಿತ್ತು ಮತ್ತು ಶಾಸಕರ ವತಿಯಿಂದ ತಾಲೂಕಿನಲ್ಲಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಯಿತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳಲ್ಲಿ ಹಲವರು ಸುದ್ದಿಯೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.