ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ ಜಿಲ್ಲೆಗೆ ಪ್ರಥಮ ಸ್ಥಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಇದೀಗ ಪ್ರಗಟಗೊಂಡಿದ್ದು ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನಗಳಿಸಿದ್ದು, ಉಡುಪಿ ಜಿಲ್ಲೆಗೆ 4 ನೇ ಸ್ಣಾನ ಲಭಿಸಿದೆ.

ಪ್ರಪ್ರಥಮ ಬಾರಿಗೆ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದ್ದು, ಒಟ್ಟು 6,66,497 ವಿದ್ಯಾರ್ಥಿಗಳಲ್ಲಿ 95,628 ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ, 3,55,078 ವಿದ್ಯಾರ್ಥಿಗಳು ಪ್ರಥಮ  ಶ್ರೇಣಿ, 1,47,055 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 68,729 ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ

“ದ್ವಿತೀಯ ಪಿಯುಸಿ ಫಲಿತಾಂಶವು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದ್ದು, ಗ್ರೇಡ್ ಬದಲು ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಯು ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಇಂಟರ್ನಲ್ ಅಸೆಸ್ಮೆಂಟ್‌ನಲ್ಲಿ ಶೇ.10 ಅಂಕಗಳ ಆಧಾರದ ಮೇಲೆ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಗೊಂಡಿದ್ದು, ಇಲಾಖೆಯ ವೆಬ್ ಸೈಟ್‌ನಲ್ಲಿ ‘Know my registration number’ಲಿಂಕ್ ನೀಡಿ ಪ್ರತಿ ವಿದ್ಯಾರ್ಥಿಗಳು ಆ ಲಿಂಕ್‌ನ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ.

ಫಲಿತಾಂಶ ತಿರಸ್ಕರಿಸುವ ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಜು.30 ರೊಳಗೆ ಹೆಸರು ನೋಂದಾಯಿಸಬೇಕಾಗಿದೆ. ಈ ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರೊಳಗೆ ಪರೀಕ್ಷೆ ನಡೆಸಲಾಗುತ್ತದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.