ವೇಣೂರಿನಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರ ತರಬೇತಿ ಕಾರ್ಯಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ದ.ಕ ಜಿಲ್ಲಾ ಪಂಚಾಯತ್ ಗ್ರಾ.ಕು.ನೀ.ನೈ ಇಲಾಖೆ, ತಾ.ಪಂ ಬೆಳ್ತಂಗಡಿ, ಸಮುದಾಯ ಸಂಸ್ಥೆಯ ಸಹಯೋಗದಲ್ಲಿ ವೇಣೂರು ಗ್ರಾ.ಪಂ ಸಭಾಂಗಣದಲ್ಲಿ ಜು.22 ರಂದು ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ನಡೆದ ವಿಶೇಷ ತರಬೇತಿ ಕಾರ್ಯಾಗಾರವನ್ನು ವೇಣೂರು ಸಿ.ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಹಾಲಿ ಸದಸ್ಯ ಸುಂದರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕುಕ್ಕೇಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಜನಾರ್ಧನ ಪೂಜಾರಿಯವರು ಕಾರ್ಯಾಗಾರವನ್ನು ಉಧ್ಘಾಟಿಸಿ ಶುಭ ಹಾರೈಸಿದರು. ಹೊಸಂಗಡಿ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಆಧಿಕಾರಿ ಗಣೇಶ್ ಶೆಟ್ಟಿ ಜಲಜೀವನ್ ಮಿಷನ್ ಧ್ಯೇಯೋದ್ದೇಶಗಳ ಕುರಿತು ಜೆ.ಜೆ.ಎಮ್ ಜಿಲ್ಲಾ ತಂಡದ ಮುಖ್ಯಸ್ಥ ಶಿವರಾಮ್ ಪಿ.ಬಿ, ಎಫ್.ಟಿ.ಕೆ ಕಿಟ್ ಪರೀಕ್ಷಾ ವಿಧಾನದ ಬಗ್ಗೆ ಬೆಳ್ತಂಗಡಿ ಪ್ರಯೋಗಾಲಯದ ಹಿರಿಯ ರಾಸಾಯನಿಕ ತಜ್ಞೆ ಸುಮಲತಾ ಮತ್ತವರ ಸಹ ಸಿಬ್ಬಂದಿ ಆದಿತ್ಯ ಅವರು ಪ್ರಾತ್ಯಕ್ಷಿಕೆ ನೀಡಿದರು.

ಜಿಲ್ಲಾ ಪಂಚಾಯತನ ಜಲ ಜೀವನ್ ಮಿಷನ್ ಇಂಜಿನಿಯರ್ ಅಶ್ವಿನ್ ಅಂತರ್‌ಜಲ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಅನುಷ್ಠಾನ ಪ್ರಗತಿ ಪರಿಶೀಲನೆ ಚರ್ಚೆ ನಡೆಯಿತು. ಅನುಷ್ಠಾನ ಬೆಂಬಲ ಸಂಸ್ಥೆ ಸಮುದಾಯದ ಸಿಬ್ಬಂದಿಗಳು ಸಹಕರಿಸಿದರು. ನೀರು ಪರೀಕ್ಷಾ ಕಿಟ್-ಎಫ್.ಟಿ.ಕೆ ಗಳನ್ನು ವಿತರಿಸಲಾಯಿತು. ವೇಣೂರು ಗ್ರಾಮ ಪಂಚಾಯತ್‌ನ ಅಬಿವೃದ್ಧಿ ಅಧಿಕಾರಿ ಸುಧಾಕರ್ ರವರು ಕಾರ್ಯಕ್ರಮ ನಿರೂಪಿಸಿದರು.

ತರಬೇತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಭಾಗವಹಿಸಿದ್ದರು. ಕುಕ್ಕೇಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್, ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಶಿರ್ಲಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜು ಮತ್ತು ವಿವಿಧ ಪಂಚಾಯತ್‌ಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.