ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಘೋಷಿಸಿದ್ದಾರೆ
ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಧನಾ ಸಮಾಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಜನತೆಯ ಅಪ್ಪಣೆ ಪಡೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದು, ನನ್ನ ಮೇಲಿನ ಪ್ರೀತಿ, ವಾತ್ಸಲ್ಯದಿಂದ 75 ವರ್ಷ ದಾಟಿದ ಬಳಿವೂ ಸಿಎಂ ಆಗಿ ಮುಂದುವರೆಯಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಪಕ್ಷದ ಅಧ್ಯಕ್ಷರಾದ ಜೆ.ಪಿ ನಡ್ಡಾರವರಿಗೆ ಧನ್ಯವಾದ ಹೇಳಿದರು. ಸಾಧನಾ ಸಮಾವೇಶದ ಭೋಜನವನ್ನು ಮುಗಿಸಿದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಸ್ತಿತ್ವವೇ ಇಲ್ಲದಂತಹ ಸಮಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿ ನಾನು ಪಕ್ಷವನ್ನು ಕಟ್ಟಿದ್ದೇನೆ. ನಾನು ಮತ್ತು ಬೆಳ್ತಂಗಡಿ ತಾಲೂಕಿನ ಕೆ. ವಸಂತ ಬಂಗೇರರವರು ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದೆವು. ಆದರೆ ವಸಂತ ಬಂಗೇರ ರವರು ಧಿಡೀರ್ ಪಕ್ಷವನ್ನು ಬಿಟ್ಟು ಹೋದ ಸಂದರ್ಭದಲ್ಲೂ ತಾನು ಎದೆಗುಂದದೆ ಪಕ್ಷವನ್ನು ಉಳಿಸಲು ಏಕಾಂಗಿಯಾಗಿ ಶ್ರಮಿಸಿ ಇಂದು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಈ ಸಂದರ್ಭದಲ್ಲಿ ಅವರು ನುಡಿದರು.