ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೆ ಸದಾಶಿವ ಶೆಣೈ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೆ ಸದಾಶಿವ ಶೆಣೈ ಆಯ್ಕೆಯಾಗಿದ್ದಾರೆ. 1982ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿಯ ರೀತ್ಯಾ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನೇಮಕಗೊಳಿಸಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿಯ (5)ರ ನಿಯಮ 5.1ರ (5)ರ ನೂತನ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ, ಸದಸ್ಯರುಗಳಾಗಿ ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿ (2)ರ ನಿಯಮ 5.1 ರ (2) ಸದಸ್ಯರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಧ್ಯಕ್ಷ ಶಿವಾನಂದ ತಗಡೂರು, ಸಿ.ಕೆ ಮಹೇಂದರ್, ಜಯಕಿರಣ ದೈನಿಕ ಪತ್ರಿಕೆಯ ಹಿರಿಯ ವರದಿಗಾರ ಜಗನ್ನಾಥ ಬಾಳ, ದೇವೇಂದ್ರಪ್ಪ ಹಾಗೂ ಕೆ.ವಿ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಮೂಲತಃ ಬೆಳ್ತಂಗಡಿ ನಿವಾಸಿಯಾಗಿರುವ  ಕೆ ಸದಾಶಿವ ಶೆಣೈರವರು ಲಂಕೇಶ್ ಪತ್ರಿಕೆಯ ವರದಿಗಾರರಾಗಿ, ಬಿಟಿವಿ ಯ ಹಿರಿಯ  ಸಿನಿಮಾ ಪತ್ರಕರ್ತರಾಗಿ ಹಾಗೂ ಪ್ರಸ್ತುತ ಬೆಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.