ಆ.14: ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್

ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಅದಾಲತ್‌ನಲ್ಲಿ ಶಾಶ್ವತ ನ್ಯಾಯ ಒದಗಿಸುವ ವ್ಯವಸ್ಥೆ

ಬೆಳ್ತಂಗಡಿ: ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಲೋಕ ಅದಾಲತ್ ಕಾರ್ಯಕ್ರಮ ಆ.14ರಿಂದ ಮತ್ತೆ ಆರಂಭಗೊಳ್ಳಲಿದೆ ಹಾಗೂ ಅಂದು ದೇಶದಾದ್ಯಂತ ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಬೆಳ್ತಂಗಡಿ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷ ನಾಗೇಶ್ ಮೂರ್ತಿ ಬಿ.ಕೆ ಹಾಗೂ ತಾಲೂಕು ವಕೀಲರ ಸಂಘದ ಅಧ್ಯಕ್ಷ ಅಲೋಶೀಯನ್ ಲೋಬೋ ತಿಳಿಸಿದರು.

ಬೆಳ್ತಂಗಡಿ ಕೋರ್ಟ್ ಹಾಲ್‌ನಲ್ಲಿ ಜು.27 ರಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ವರ್ಷದಲ್ಲಿ 3 ಬಾರಿ ಅದಾಲತ್ ನಡೆಯಲಿದೆ. ನ್ಯಾಯಾಲಯದಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಹಾಗೂ ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಬಹುದಾದ ಪ್ರಕರಣಗಳನ್ನು ಇತ್ತಂಡಗಳನ್ನು ಕರೆಸಿ ಮಾತುಕತೆ ಮೂಲಕ ಇತ್ಯರ್ಥಗೊಳಿಸುವ ಮೂಲಕ ಈ ಅದಾಲತ್‌ನಲ್ಲಿ ಶಾಶ್ವತ ನ್ಯಾಯ ಒದಗಿಸಲು ವ್ಯವಸ್ಥೆ ರೂಪಿಸಲಾಗಿದೆ. ಇದರಿಂದ ಜನರ ಹಣ ಮತ್ತು ಸಮಯ ಉಳಿತಾಯವಾಗುತ್ತದೆ ಎಂದರು.

ಅದೇ ರೀತಿ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಹಣಕಾಸು ಮೂಲದ ಚೆಕ್ ಬೌನ್ಸ್ ಕೇಸ್‌ಗಳು ಇತ್ಯಾದಿ ಸಣ್ಣಪುಟ್ಟ ಪ್ರಕರಣಗಳ್ನು ಸರಿಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ವೇಳೆ ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್.ಕೆ.ಜೆ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೈಣೈ, ವಕೀಲರ ಸಂಘದ ಉಪಾಧ್ಯಕ್ಷ ವಸಂತ ಮರಕಡ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್ ವಿರೂಪಾಕ್ಷಪ್ಪ, ಸರಕಾರಿ ಅಭಿಯೋಕರರಾದ ದಿವ್ಯರಾಜ್, ಆಶಿತಾ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.