ಮಚ್ಚಿನ: ಕೋವಿಡ್-19 ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ಬಂಧುಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ರವರ ಮಹತ್ವಕಾಂಕ್ಷೆ ಯೋಜನೆಯಲ್ಲಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮವು ಜು.27 ರಂದು ನಡೆಯಿತು.
ಈ ಸಂದರ್ಭದಲ್ಲಿ ಮಚ್ಚಿನ ಗ್ರಾ.ಪಂ. ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು ಪಂಚಾಯತ್ ವ್ಯಾಪ್ತಿಯ 148 ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಬೆಳ್ತಂಗಡಿ ಸಂಜೀವಿನಿ ಸಂಘದ ವಲಯ ಮೇಲ್ವಿಚಾರಕ ಜಯನಂದ, ತಾ.ಪಂ. ಮಾಜಿ ಸದಸ್ಯ ವಸಂತಿ, ಗ್ರಾ.ಪಂ ಉಪಾಧ್ಯಕ್ಷೆ ಡೀಕಮ್ಮ, ಗ್ರಾ.ಪಂ. ಸದಸ್ಯರಾದ ಪ್ರಮೋದ್ ಕುಮಾರ್, ಚಂದ್ರಶೇಖರ್ ಬಿ.ಎಸ್. ದಿನೇಶ್, ಜಯಶ್ರೀ, ತಾರ, ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ ಸ್ವಾಗತಿಸಿ ಧನ್ಯವಾದ ಕೋರಿದರು.