ಮುಂಡಾಜೆಯಲ್ಲಿ ಗಾಯಗೊಂಡ ಜಿಂಕೆ ಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ- ಕಾಪು ರಕ್ಷಿತಾರಣ್ಯದ ಅಂಬಡ್ತ್ಯಾರು ಸಮೀಪ ಗಾಯಗೊಂಡು ಒದ್ದಾಡುತ್ತಿದ್ದ ಜಿಂಕೆ ಜುಲೈ 27 ರಂದು ಪತ್ತೆಯಾಯಿತು.

ಸ್ಥಳೀಯರು ಸೊಪ್ಪು ತರಲು ಕಾಡಿಗೆ ತೆರಳಿದ ಸಂದರ್ಭದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಜಿಂಕೆ ಕಂಡುಬಂದಿತು.

ಈ ಬಗ್ಗೆ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಅರಣ್ಯ ರಕ್ಷಕ ಶರತ್ ಶೆಟ್ಟಿ,ಸದಾನಂದ ಆಗಮಿಸಿ ಪರಿಶೀಲನೆ ನಡೆಸಿದರು. ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯ ಪರಿವೀಕ್ಷಕ ನಾಗಶಯನ ರಾವ್ ಅವರು ಪ್ರಥಮ ಚಿಕಿತ್ಸೆ ನೀಡಿದ್ದು,ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಪಶು ಆಸ್ಪತ್ರೆಗೆ ಸಾಗಿಸಲಾಯಿತು.

ಸ್ಥಳೀಯರಾದ ಅಣ್ಣಯ್ಯ, ಚಂದ್ರಶೇಖರ,ಅಚ್ಚುತ, ಗಣೇಶ ಮೊದಲಾದವರು ಸಹಕರಿಸಿದರು.

ಜಿಂಕೆಯು ಭಯಗೊಂಡು ಓಡುತ್ತಿರುವಾಗ ಬಿದ್ದು ಗಾಯಗೊಂಡಿರುವ ಸಾಧ್ಯತೆ ಇದೆ.ಶರೀರದ ಮೇಲ್ಭಾಗದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ.ಕುತ್ತಿಗೆ ಭಾಗದಲ್ಲಿ ಮೂಳೆಗೆ ಪೆಟ್ಟಾಗಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ಬೆಳ್ತಂಗಡಿ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಹೇಳಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.