ಕಳಿಯ ಗ್ರಾಮದ ಪೇರಾಜೆ ನಿವಾಸಿ ಜಿನ್ನಪ್ಪ ಗೌಡ ಕೊರೊನಾಗೆ ಬಲಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ : ಕಳಿಯ ಗ್ರಾಮದ ಪೇರಾಜೆ ನಿವಾಸಿ ಜಿನ್ನಪ್ಪ (65.ವ) ರವರು ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲಿ ಜು.30 ರಂದು ಮಂಗಳೂರಿನ  ಸರಕಾರಿ ಆಸ್ಪತ್ರೆಯಲ್ಲಿ  ನಿಧನರಾದರು.

ಕೃಷಿಕರಾಗಿದ್ದ ಜಿನ್ನಪ್ಪ ಗೌಡ ರವರು ಕೆಲದಿನಗಳಿಂದ ಅನಾರೋಗ್ಯದಿಂದ  ಬಳಲುತ್ತಿದ್ದರು. ಮೂರು ದಿನಗಳ ಹಿಂದೆ  ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ವೇಳೆ ಇವರಿಗೆ ಸೋಂಕು ಧೃಢಪಟ್ಟಿತ್ತು.  ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸಿದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಬೇಬಿ ಗೌಡ ಸೇರಿದಂತೆ ಮೂವರು ಪುತ್ರರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಪಿ.ಪಿ.ಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಗೌಡ, ಗ್ರಾ.ಪಂ ಸದಸ್ಯರು, ಕಾರ್ಯದರ್ಶಿ,ಸಿಬ್ಬಂದಿ ವರ್ಗದವರು, ಕಳಿಯ ಗ್ರಾ.ಪಂ ಮಾಜಿ ಅಧ್ಯಕ್ಷರು, ಪಡಂಗಡಿ ಪ್ರಾಥಮಿಕ ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿಯರು,  ಕಳಿಯ ಗ್ರಾ.ಪಂ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.