ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ಕೋವಿಡ್-19 ಲಾಕ್ ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೀಡಾದ ಮತ್ತು ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮವು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಶಶಿಪ್ರಭಾ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಭಾರತೀಯ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಜಯರಾಮ್ ಸಾಲಿಯಾನ್ ರವರನ್ನು ಗ್ರಾ.ಪಂ. ವತಿಯಿಂದ ಸನ್ಮಾನಿಸಲಾಯಿತು.

ಗ್ರಾ.ಪಂ ವ್ಯಾಪ್ತಿಯಲ್ಲಿನ ೧೮೦ ಫಲಾನುಭವಿಗಳಿಗೆ ಆಹಾರದ ಸಾಮಾಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತ ಶೆಟ್ಟಿ ಹಾಗೂ ಗ್ರಾ.ಪಂ. ಸದಸ್ಯ ವಿಜಯ್ ಜಿ. ಅರಳಿ ತಾಲೂಕು ಭಾರತೀಯ ಮಜ್ದೂರ್ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಕಾರ್ಯಕ್ರಮವನ್ನು ನಿರೂಪಿಸಿದರು. ಗ್ರಾ.ಪಂ ಸದಸ್ಯರಾದ ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಹರೀಶ್ ಶೆಟ್ಟಿ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.