ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ವಾರ್ಷಿಕ ವರದಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಜನಜಾಗೃತಿ ವೇದಿಕೆಯ ಬೆಳ್ತಂಗಡಿ ಪ್ರಾದೇಶಿಕ ವಿಭಾಗದ ವಾರ್ಷಿಕ ವರದಿ ಮತ್ತು ಪ್ರಾಕೃತಿಕ ದುರಂತಗಳು ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಕೈಪಿಡಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ರೂಪಿಸುವಲ್ಲಿ ಜನಜಾಗೃತಿ ವೇದಿಕೆಯ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು.
ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸೇವಾ ಕಾರ್ಯ, ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು ಕೂಡಾ ಸ್ಥಳೀಯರ ಸಹಕಾರದೊಂದಿಗೆ ಉತ್ತಮವಾಗಿ ಮೂಡಿ ಬರುತ್ತಿವೆ. ಕೊರೊನಾದಿಂದಾಗಿ ಮದ್ಯವರ್ಜನ ಶಿಬಿರಗಳು ಸ್ಥಗಿತಗೊಂಡರೂ ನವಜೀವನ ಸಮಿತಿಗಳನ್ನು ಬಲಪಡಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಜನಜಾಗೃತಿ ವೇದಿಕೆಯ ಆಡಳಿತ ಸಮಿತಿ ಸದಸ್ಯರಾದ ಬೆಂಗಳೂರಿನ ವಿ. ರಾಮಸ್ವಾಮಿ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಎಸ್. ಎನ್. ಯೋಜನಾಧಿಕಾರಿಗಳಾದ ಮೋಹನ್ ಮತ್ತು ಜೈವಂತ ಪಟಗಾರ ಹಾಗೂ ಸಹಾಯಕ ಪ್ರಬಂಧಕಿ ಭಾಗೀರಥಿ, ಯನ್. ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.