ಪರಿಶಿಷ್ಟ ಪಂಗಡದ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ದ.ಕ. ಜಿಲ್ಲಾ ಪಂಚಾಯತ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ ಆ.4 ರಂದು ಬೆಳ್ತಂಗಡಿ ಸ್ತ್ರೀ ಶಕ್ತಿ ಭವನದಲ್ಲಿ ಉದ್ಘಾಟನೆಗೊಂಡಿತು.

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಪ್ರಭಾರ ಯೋಜನಾಧಿಕಾರಿ ಶ್ರೀಲತಾ ವಹಿಸಿದರು.

ತಾಲೂಕು ಸಂಯೋಜಕ ಮತ್ತು ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕ ಜಯಾನಂದ ಲಾಯಿಲ, ತರಬೇತುದಾರರಾಗಿ ಉಜಿರೆ ರುಡ್‌ಸೆಟ್‌ನ ಹಿರಿಯ ಉಪನ್ಯಾಸಕ ಜೇನಿಮ್ಸ್, ಅಬ್ರಾಹಾಂ, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಲೋಚಕಿ ಉಷಾ ವಿ. ನಾಯಕ್, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಸುಮಿತ್ರಾ, ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿಯ ಹಿರಿಯ ಮೇಲ್ವಿಚಾರಕಿ ರತ್ನಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.