ಬೆಳ್ತಂಗಡಿ: ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನೂತನ ಸಚಿವ ಸಂಪುಟವು ಅನುಭವಿಗಳಿಗೆ ಮತ್ತು ಯುವಕರಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ರಾಜ್ಯದ ಅಭಿವೃದ್ಧಿಯ ವೇಗಕ್ಕೆ ಮತ್ತಷ್ಟು ಶಕ್ತಿ ನೀಡಿದಂತಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಮಂತ್ರಿಮಂಡಲವು ಹೊಸತನ ಮತ್ತು ಹಿರಿತನದಿಂದ ಕೂಡಿದ್ದು, ಈ ಮಂತ್ರಿಮಂಡಲವು ರಾಜ್ಯದ ಒಟ್ಟು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದೆ. ಕರಾವಳಿಯ ಹಿರಿಯ ನಾಯಕರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಎಸ್.ಅಂಗಾರ ರವರಿಗೆ ಮಂತ್ರಿಮಂಡಲದಲ್ಲಿ ಸ್ಥಾನಮಾನ ದೊರಕಿದ್ದು, ಕರಾವಳಿ ಪ್ರದೇಶವು ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಶಾಸಕ ಹರೀಶ್ ಪೂಂಜ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.