ಸರ್ಕಾರಿ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯ ಸ್ಮರಣಿಕೆಗಳನ್ನು ನೀಡದಿರುವಂತೆ ಸಿ.ಎಂ ಸೂಚನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಸ್ಮರಣಿಕೆಗಳನ್ನು ನೀಡಬಾರದು. ಅದಕ್ಕೆ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಆ.10 ರಂದು ಬೆಂಗಳೂರಿನಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದ್ದಾರೆ.
ಈ ನಿರ್ದೇಶನವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಸರಕಾರಿ ಇಲಾಖೆಗಳು ಹಾಗೂ ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.