ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆಗೆ ಶಾಸಕರಿಂದ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾರಾವಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರ ಆಶಯದಂತೆ ಪ್ರತಿ ಬೂತ್ ಸಮಿತಿ ಅಧ್ಯಕ್ಷರ ಮನೆಗಳಿಗೆ ಬಿಜೆಪಿ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರವರು ಸೆ.8 ರಂದು ನಾರಾವಿಯಲ್ಲಿ ಚಾಲನೆ ನೀಡಿದರು.

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ತಾಲೂಕಿನ 241 ಬೂತುಗಳ ಪೈಕಿ ನಾರಾವಿ 1ನೇ ಬೂತ್‌ನ ಅಧ್ಯಕ್ಷ ದಯಾನಂದ ಕೋಟ್ಯಾನ್ ಅವರ ಮನೆಗೆ ವಿವಿಧ ಚೆಂಡೆ-ಮದ್ದಳೆ, ಕೊಂಬುಗಳಿಂದ ಮೆರವಣಿಗೆಯಲ್ಲಿ ತೆರಳಿ ಬಿಜೆಪಿ ನಾಮಫಲಕ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಸಹಕಾರಿ ಭಾರತಿ ಅಧ್ಯಕ್ಷ ಸುಂದರ ಹೆಗ್ಡೆ, ನಾರಾವಿ ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀನಿವಾಸ ಕಿಣಿ, ನಾರಾವಿ ಜಿ.ಪಂ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ, ಕುತ್ಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮಚಂದ್ರ ಭಟ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಹಿಂದು ಮುಖಂಡ ಗುರುಪ್ರಸಾದ್ ನಾರಾವಿ, ನಾರಾವಿ ಗ್ರಾ,ಪಂ ಸದಸ್ಯರಾದ ರಾಜವರ್ಮ ಜೈನ್, ಸರಿತಾ, ಮಮತಾ, ನಾರಾಯಣ ಪೂಜಾರಿ, ಸುಮಿತ್ರಾ, ವಸಂತ, ಮೀನಾ, ಸಂತೋಷ್, ಸುದರ್ಶನ್, ಹಾಗೂ ಬಿಜೆಪಿ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.