ಸೆ.18: ಬೆಸ್ಟ್ ಪೌಂಡೇಶನ್ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಸ್ಟ್ ಪೌಂಡೇಷನ್ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಯಕ್ಷ ಪ್ರಿಯರಿಗೆ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಾಗಾರ  ಸೆ. 18 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಸಮಾಜ ಸೇವಕ ರವಿ ಕಟಪಾಡಿ ಇವರು ಉದ್ಘಾಟಿಸಲಿದ್ದು, ಹೈಕೋರ್ಟ್  ನ್ಯಾಯವಾದಿ, ಬೆಸ್ಟ್ ಪೌಂಡೇಶನ್ ನ ರಕ್ಷಿತ್ ಶಿವರಾಂ  ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ  ನಾಮದೇವ್ ರಾವ್ ಮುಂಡಾಜೆ ,ನಾಟ್ಯ ತರಬೇತಿಯ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ದೇಶ ಭಕ್ತಿಗೀತೆ ಮತ್ತು ಭಾಷಣ ಸ್ಪರ್ಧೆಯ ವಿಜೇತರಿಗೆ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಶ್ರೀ ಕೃಷ್ಣ  ವೇಷ ಫೋಟೋ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಸದಸ್ಯರು ತಮ್ಮ ವಿವರಗಳನ್ನು 7204978230 ಈ ನಂಬರ್ ಗೆ ವಾಟ್ಸಾಪ್ ಮೂಲಕ ಕಳುಹಿಸಿಕೊಡಬಹುದಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.