ದ.ಕ ಜಿಲ್ಲೆಯಾದ್ಯಂತ ಶಾಲೆಗಳನ್ನು ತೆರೆಯಲು ಜಿಲ್ಲಾಧಿಕಾರಿಗಳ ಆದೇಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೋವಿಡ್ ನಿಯಮಾವಳಿಗಳ ಪಾಲನೆಯೊಂದಿಗೆ ಸೆಪ್ಟೆಂಬರ್ 17 ರಿಂದ ಹೈಸ್ಕೂಲ್ ತರಗತಿಗಳು ಹಾಗೂ ಸೆ.20 ರಿಂದ 6-7ನೇ ತರಗತಿಗಳನ್ನು ಆರಂಭಿಸಲು ಡಿ.ಸಿ  ಸಮ್ಮತಿ

ಮಂಗಳೂರು : ಕೋವಿಡ್ ಮುಂಜಾಗ್ರತಾ ಕ್ರಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳ್ನು ಆರಂಭಿಸುವಂತೆ ದ.ಕ ಜಿಲ್ಲಾಧಿಕಾರಿ ಡಾ.  ರಾಜೇಂದ್ರ ಕೆ. ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಶಾಲೆಗಳನ್ನು ತೆರೆಯುವ ಬಗ್ಗೆ ಸೆ.13 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾದ ಸಭೆಯ  ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು, ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಸೆ.17 ರಿಂದ 8, 9 ಮತ್ತು 10ನೇ ತರಗತಿಗಳನ್ನು ಮತ್ತು ಸೆಪ್ಟೆಂಬರ್ 20 ರಿಂದ 6 ಮತ್ತು 7ನೇ ತರಗತಿಗಳನ್ನು ಆರಂಭಿಸುವಂತೆ  ಸೂಚಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಈಗಾಗಲೇ 261 ಮಕ್ಕಳಿಗೆ ಕೋವಿಡ್ ಸೋಂಕು ಧೃಡಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಅಂತಹ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಪಡೆದು ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು.

ಶಾಲೆಯ ಮುಖ್ಯಸ್ಥರು ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಹಾಗೂ ಇನ್ನಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಾಲೆಗಳು ಆರಂಭವಾದ ಬಳಿಕ ಭೌತಿಕ ತರಗತಿಗಳ ಜೊತೆಗೆ ಆನ್‌ಲೈನ್ ತರಗತಿಗಳನ್ನು ಕೂಡ ಮುಂದುವರೆಸಬೇಕು ಜೊತೆಗೆ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ಶಿಕ್ಷಕರ ಹಾಗೂ ಶಾಲಾ ಸಿಬ್ಬಂದಿಗಳ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ವಿದ್ಯಾರ್ಥಿಗಳ ಮನೆಯವರ ಆರೋಗ್ಯವನ್ನು ವಿಚಾರಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಪ್ರಜ್ಞಾ ಅಮ್ಮೆಂಬಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್,ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಣ್ಣ, ಖಾಸಗಿ ಶಾಲಾ ಅಸೋಷಿಯೇಶನ್‌ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.