ನಡ: ಶೌರ್ಯ ಮತ್ತು ವಿಪತ್ತು ನಿರ್ವಹಣಾ ತಂಡ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಹಭಾಗಿತ್ವದಲ್ಲಿ ನಡ ಗ್ರಾಮದ ಮೂಡಾಯಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೆ. 14 ರಂದು ಸ್ವಚ್ಛತಾ ಕಾರ್ಯ ನಡೆಯಿತು.
ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಹರಿಶ್ಚಂದ್ರ ಎನ್.ಬಿ, ಗೋಪಾಲಕೃಷ್ಣ, ವಲೇರಿಯನ್ ವೇಗಸ್, ಜಯರಾಮ, ಜೀವನ್ ಡಿ’ಸೋಜಾ, ಅರ್ಶದ್, ಶ್ರೀಧರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹಿಮಲಾಕ್ಷಿ ಗೌಡ, ಉಪಾಧ್ಯಕ್ಷೆ ಮೀನಾಕ್ಷಿ, ಸಮಿತಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಧ್ಯಾಪಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.