ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಾರ್ಯ: ಬಾರ್ಯ ಗ್ರಾಮದ ಸರಳಿಕಟ್ಟೆ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯ ಬೀರುವನಲ್ಲಿದ್ದ ರೂ.1.20 ಲಕ್ಷ ನಗದು ಹಾಗೂ ಲಕ್ಷಾಂತರ ಮೌಲ್ಯದ(10 ಪವನ್ ಚಿನ್ನ) ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಸೆ.17 ರಂದು ಬೆಳಕಿಗೆ ಬಂದಿದೆ.

ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ  ಎಂಬವರ ಮನೆಯಲ್ಲಿ ಈ ದರೋಡೆ ನಡೆದಿದ್ದು, ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಮನೆಯವರು ಮನೆಗೆ ಮರಳಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ  ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪ ನಿರೀಕ್ಷಕ ಕುಮಾರ್ ಸಿ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.