ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್  ಬೆಳ್ತಂಗಡಿ ವಲಯ ಸಮಿತಿ ವಿಶೇಷ ಸಭೆಯು ಮಂಜುಶ್ರೀ ಜೇಸಿ ಭವನದಲ್ಲಿ ನಡೆಯಿತು.

ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯಲ್ಲಿ ಟೈಲರ್ಸ್ ವೃತ್ತಿ ಭಾಂಧವರಿಗೆ ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳು ಹಾಗೂ ಜೀವ ಭದ್ರತೆಯ ವಿಮೆಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರದಿಂದ ವಿವಿಧ ಉದ್ಯಮ ನಡೆಸಲು ಸಿಗುವ ಬ್ಯಾಂಕ್ ಸಾಲ ಸೌಲಭ್ಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ಉಷಾ ಕಾಮತ್ ರವರು ಸಂಪೂರ್ಣ ಮಾಹಿತಿ ನೀಡಿದರು.

ಕ್ಷೇತ್ರ ಸಮಿತಿ ಅಧ್ಯಕ್ಷ ರಾಘವ ಪುತ್ರನ್ ಸಂಘಟನೆ ಬಲ ಪಡಿಸುವ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮಿತಿಯ ಮುಂದಿನ ಎರಡು ವರ್ಷಗಳ ಅವಧಿಗೆ  ಆಯ್ಕೆಯಾದ ನೂತನ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಕಾರ್ಯದರ್ಶಿ ಶಶಿಕಲಾ, ಕೋಶಾಧಿಕಾರಿ ವಿಶಾಲಾಕ್ಷಿ ಹಾಗೂ ಪದಾಧಿಕಾರಿಗಳು  ಅಧಿಕಾರ ಸ್ವೀಕರಿಸಿದರು ಹಾಗೂ ನಿರ್ಗಮನ ಅಧ್ಯಕ್ಷ ಹರೀಶ್ ಟೈಲರ್ ಹಾಗೂ ಕಾರ್ಯದರ್ಶಿ ಲಕ್ಷ್ಮೀಶರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಜಿಲ್ಲಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ, ಮಾಜಿ ಅಧ್ಯಕ್ಷೆ ಶಾಂಭವಿ ಪಿ.ಬಂಗೇರ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಮೇಶ್ ಪ್ರಾರ್ಥಿಸಿ, ವಲಯ ಸಮಿತಿ ಕಾರ್ಯದರ್ಶಿ ಶಶಿಕಲಾ ಸ್ವಾಗತಿಸಿ,  ಸದಾನಂದ ಸಾಲಿಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿ, ವಲಯ ಸಮಿತಿ ಕೋಶಾಧಿಕಾರಿ ವಿಶಾಲಾಕ್ಷಿ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.