ಅಕ್ರಮ ಗಾಂಜಾ ಸಾಗಾಟ: ಇಬ್ಬರು ಆರೋಪಿಗಳ ಬಂಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರೂ.45850 ಮೌಲ್ಯದ ಗಾಂಜ ಪೊಲೀಶ್ ವಶಕ್ಕೆ:ಕುವೆಟ್ಟು ಗ್ರಾಮದ ಸಬರಬೈಲು ಬಳಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

ಕುವೆಟ್ಟು: ಇಲ್ಲಿಯ ಸಬರಬೈಲು ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಸೆ.17 ರಂದು ಬೆಳ್ತಂಗಡಿ ಪೊಲೀಸಾ ಠಾಣಾ ಸಿಬ್ಬಂದಿಗಳು ಕುವೆಟ್ಟು ಗ್ರಾಮದ ಸಬರಬೈಲು ಎಂಬಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಟಿವಿಎಸ್ ವೇಗೋ ಮೋಟಾರು ಸೈಕಲ್ ವಾಹನದಲ್ಲಿ ಆರೋಪಿಗಳಾದ ಮಹಮ್ಮದ್ ರಫೀಕ್ ಮತ್ತು ನೌಫಾಲ್ ಎಂಬವರು ಯಾವುದೇ ಪರವಾನಗಿ ಇಲ್ಲದೆ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಕೂಡಲೇ ಇಬ್ಬರು ಆರೋಪಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಸುಮಾರು ರೂ.45850 ಮೌಲ್ಯದ ಒಟ್ಟು 1.310 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.