ಕುವೆಟ್ಟು ಗ್ರಾ.ಪಂ ವತಿಯಿಂದ ಪಿಡಿಒ ಶ್ರೀನಿವಾಸ್ ಪಿ.ಡಿಯವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುವೆಟ್ಟು : ಕುವೆಟ್ಟು ಗ್ರಾಮ ಪಂಚಾಯತದಲ್ಲಿ ಹಲವು ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಬೇರೆ ಪಂಚಾಯತಕ್ಕೆ ವರ್ಗಾವಣೆ ಹೊಂದಿರುವ ಪಿಡಿಒ ಶ್ರೀನಿವಾಸ ಡಿ.ಪಿ ರವರಿಗೆ ಗ್ರಾ.ಪಂ ವತಿಯಿಂದ ಬೀಳ್ಕೊಡುಗೆ ಸಮಾರಂಭ  ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಕಾರ್ಯದರ್ಶಿ ಸೇವಂತಿ ಹಾಗೂ ಗ್ರಾ.ಪಂ ಸದಸ್ಯರ ಸಮ್ಮುಖದಲ್ಲಿ ಪಿಡಿಒ ಶ್ರೀನಿವಾಸ್ ಡಿ.ಪಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

 ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಆನಂದ ಕೋಟ್ಯಾನ್, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗ್ರಾ.ಪಂ ಸದಸ್ಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

 ಸಿಬ್ಬಂದಿ ಆನಂದ ಕೋಟ್ಯಾನ್  ಕಾರ್ಯಕ್ರಮ ನಿರೂಪಿಸಿ, ಗ್ರಾ.ಪಂ ಸದಸ್ಯೆ ಭಾರತಿ ಎಸ್ ಶೆಟ್ಟಿ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.