‘ಸುದ್ದಿ’  ಆಶಯದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ರಥಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ತಾಲೂಕಿನಾದ್ಯಂತ ಗಾಂಧಿ ಜಯಂತಿ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಪ್ರಯುಕ್ತ  ತಾಲೂಕಿನಾದ್ಯಂತ ಸಂಚರಿಸಲಿರುವ ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯ ಸಂದೇಶವನ್ನು ಸಾರುವ ಗಾಂಧಿ ರಥಕ್ಕೆ ಸೆ.20 ರಂದು ಬೆಳ್ತಂಗಡಿಯ ಮಿನಿ ವಿಧಾನ ಸೌಧದ  ಬಳಿ ಚಾಲನೆ ನೀಡಲಾಯಿತು.
ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ ರವರು ಸ್ವಾತಂತ್ರ್ಯ ಘೋಷಣೆಯ ಧ್ವನಿ ಮುದ್ರಿಕೆಗೆ ಚಾಲನೆ ನೀಡಿದರು.

ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷ ಜಯಾನಂದ ಗೌಡರವರು ತೆಂಗಿನಕಾಯಿ ಒಡೆಯುವ ಮೂಲಕ ಸುದ್ದಿ ಆಶಯದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ರಥಯಾತ್ರೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ  ಡಾ| ಯು.ಪಿ ಶಿವಾನಂದ, ಸುದ್ದಿ ಬಿಡುಗಡೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಚನ ಊರುಬೈಲು, ಬೆಳ್ತಂಗಡಿ ಕಛೇರಿ ವ್ಯವಸ್ಥಾಪಕ ಮಂಜುನಾಥ ರೈ, ಮೀಡಿಯಾ ವಿಭಾಗದ ಮುಖ್ಯಸ್ಥ ದಾಮೋದರ ದೊಂಡೋಲೆ, ಪ್ರಧಾನ ವರದಿಗಾರ ಬಿ.ಎಸ್. ಕುಲಾಲ್, ಸಹಾಯಕ ವ್ಯವಸ್ಥಾಪಕ ಜಾರಪ್ಪ ಪೂಜಾರಿ ಬೆಳಾಲು, ಪ್ರಸರಣ ವಿಭಾಗದ ಮುಖ್ಯಸ್ಥ ತಿಮ್ಮಪ್ಪ ಗೌಡ ನಿಡ್ಲೆ, ವರದಿಗಾರರಾದ ಹೆರಾಲ್ಡ್ ಪಿಂಟೊ, ಪಿ.ಹೆಚ್ ಈಶ್ವರ್, ಸಂತೋಷ್ ಪಿ ಕೋಟ್ಯಾನ್, ಮೀಡಿಯಾ ವಿಭಾಗದ ಪ್ರವೀಣ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಆದಿತ್ಯರಾವ್ ದೊಂಡೋಲೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌತಮ್ ಶೆಟ್ಟಿ ಪ್ರಾಸ್ತಾವಿಸಿದರು. ಜಾಹೀರಾತು ವಿಭಾಗದ ಮುಖ್ಯಸ್ಥ ತುಕಾರಾಮ ಬಿ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.