ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ದಿ| ಆಸ್ಕರ್ ಫೆರ್ನಾಂಡಿಸ್ ರಿಗೆ ಶ್ರದ್ಧಾಂಜಲಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಹಾಗೂ ವಿವಿಧ ಘಟಕಗಳ ವತಿಯಿಂದ ಇತ್ತೀಚೆಗೆ ನಿಧನರಾದ  ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ದಿ| ಆಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆ ಸೆ.20 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ನಡೆಯಿತು.

ಮಾಜಿ ಸಚಿವ ಕೆ.‌ಗಂಗಾಧರ ಗೌಡ, ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ,  ಹಿರಿಯ ಮುಖಂಡ ರಾಜಶೇಖರ ಅಜ್ರಿ ಇವರುಗಳು  ಅಗಲಿದ ನಾಯಕ ಆಸ್ಕರ್ ಫರ್ನಾಂಡಿಸ್ ರವರಿಗೆ  ನುಡಿನಮನ ಸಲ್ಲಿಸಿ, ಶ್ರದ್ದಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷ ಸಲೀಮ್. ಕೆ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷ ಅಶ್ರಫ್ ಬಿ ನೆರಿಯ, ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ, ಜಿಲ್ಲಾ ಕಾಂಗ್ರೆಸ್ ಮುಖಂಡ ಎ.ಸಿ ಮ್ಯಾಥ್ಯು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ದಯಾನಂದ ಬೆಳಾಲು, ಹಿಂದುಳಿದ ವರ್ಗಗಳ ಉಭಯ ಬ್ಲಾಕ್ ಅಧ್ಯಕ್ಷರಾದ ದಯಾನಂದ ದೇವಾಡಿಗ ಮತ್ತು ಶುಬಿತ್, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ  ವಂದನಾ ಅಂಡಿಂಜೆ, ಎಸ್.ಸಿ ಘಟಕದ ಅಧ್ಯಕ್ಷ ರವಿ ನೇತ್ರಾವತಿ ನಗರ, ಹಾಗೂ ಕಾಂಗ್ರೆಸ್ ಕಾರ್ಯಕರ್ತರು   ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.