ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವಿವಿಧ ಘಟಕಗಳ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕ ಹಾಗೂ  ಅಲ್ಪಸಂಖ್ಯಾತರ ಘಟಕದ ವತಿಯಿಂದ ಇತ್ತೀಚೆಗೆ ದೆಹಲಿಯಲ್ಲಿ  ನಡೆದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿ ರಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ಹಾಗೂ ದೇಶದ ವಿವಿಧ ಕಡೆ ನಡೆಯುತ್ತಿರುವ ಮಹಿಳಾ ದೌರ್ಜನ್ಯವನ್ನು ಖಂಡಿಸಿ,  ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಸೆ.20 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.‌ಗಂಗಾಧರ ಗೌಡ, ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ,  ಹಿರಿಯ ಮುಖಂಡ ರಾಜಶೇಖರ ಅಜ್ರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಕೆ.ಕೆ.ಶಾಹಲ್ ಹಮೀದ್, ತಾ.ಪಂ ಮಾಜಿ ಸದಸ್ಯ ವಿನ್ಸೆಂಡ್ ಡಿ,ಸೋಜ, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ, ಮುಸ್ತರ್ ಜಾನ್ ಮೆಹೆಬೂಬ್, ಜನಾರ್ಧನ್, ಎಪಿಎಂಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷ ಸಲೀಮ್. ಕೆ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷ ಅಶ್ರಫ್ ಬಿ ನೆರಿಯ, ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ, ಜಿಲ್ಲಾ ಕಾಂಗ್ರೆಸ್ ಮುಖಂಡ ಎ.ಸಿ ಮ್ಯಾಥ್ಯು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ದಯಾನಂದ ಬೆಳಾಲು, ಹಿಂದುಳಿದ ವರ್ಗಗಳ ಉಭಯ ಬ್ಲಾಕ್ ಅಧ್ಯಕ್ಷರಾದ ದಯಾನಂದ ದೇವಾಡಿಗ ಮತ್ತು ಶುಬಿತ್, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ  ವಂದನಾ ಅಂಡಿಂಜೆ, ಎಸ್.ಸಿ ಘಟಕದ ಅಧ್ಯಕ್ಷ ರವಿ ನೇತ್ರಾವತಿ ನಗರ, ಹಾಗೂ ಕಾಂಗ್ರೆಸ್ ಕಾರ್ಯಕರ್ತರು  ಪ್ರತ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಬೆಳ್ತಂಗಡಿ ಗುರು ನಾರಾಯಣ ವಾಣಿಜ್ಯ ಸಂಕೀರ್ಣ ಕಟ್ಟಡದ ಬಳಿಯಿಂದ ಬೆಳ್ತಂಗಡಿ ಮುಖ್ಯಪೇಟೆಯಲ್ಲಿ ಸಾಗಿ ತಾಲೂಕು ಮಿನಿ ವಿಧಾನ ಸೌಧದವರೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ರಾಲಿ ನಡೆಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.