ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಉಪಾಧ್ಯಕ್ಷರಾಗಿ ಡಿ.ಪುಷ್ಪಾ ಅವಿರೋಧವಾಗಿ ಆಯ್ಕೆ

ವೇಣೂರು: ವೇಣೂರು  ಗ್ರಾಮ ಪಂಚಾಯತದ  ನೂತನ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಉಪಾಧ್ಯಕ್ಷರಾಗಿ ಡಿ.ಪುಷ್ಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ನಡೆದ ವೇಣೂರು ಗ್ರಾಮ ಪಂಚಾಯತದ ಚುನಾಯಿತ ಜನಪ್ರತಿನಿಧಿಗಳ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೆ.29 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ವೇಣೂರು ಗ್ರಾಮ ಪಂಚಾಯತದ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ’  ಮೀಸಲಾತಿ ನಿಗದಿಯಾಗಿದ್ದು, 2 ಅವಧಿಗಳಲ್ಲಿಯೂ ಗ್ರಾ.ಪಂ. ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ನೇಮಯ್ಯ ಕುಲಾಲ್ ರವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಯಾಗಿದ್ದು,  2 ಅವಧಿಗಳಲ್ಲಿ ಗ್ರಾ.ಪಂ ಸದಸ್ಯರಾಗಿ ಸೇವೆ ಸಲ್ಲಿಸಿದ ಡಿ.ಪುಷ್ಪಾ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ  ಇಬ್ಬರೂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸೆ್. ಚಂದ್ರಶೇಖರ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್  ಡಿ, ಕಾರ್ಯದರ್ಶಿ ವನಜಾ, ಗ್ರಾ.ಪಂ ಸದಸ್ಯರು, ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು,

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.