ಪಿಡಿಒ ಪಿ.ಹೆಚ್ ಪ್ರಕಾಶ್ ಶೆಟ್ಟಿ ರವರಿಗೆ ಜಿಲ್ಲಾ ಮಟ್ಟದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನ

ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ತ್ಯಾಜ್ಯ ನಿರ್ವಹಣೆಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿ ಉನ್ನತ ಸಾಧನೆ ಮಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ದ.ಕ.ಜಿ.ಪಂ ವತಿಯಿಂದ ಅ.2 ರಂದು ಮಂಗಳೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಉಜಿರೆ, ಲಾಯಿಲ, ಚಾರ್ಮಾಡಿ ಗ್ರಾಮ ಪಂಚಾಯತ್ ಗಳಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಯೋಜನೆಗಳನ್ನು ರೂಪಿಸಿ ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಮಾರ್ಪಡಿಸಿ  ಆದಾಯದ ಮೂಲವಾಗಿ ಪರಿವರ್ತಿಸುವಲ್ಲಿ ಮಾಡಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಇವರಿಗೆ ಶಾಲು ಹೊದಿಸಿ,  ಸ್ವಚ್ಛತಾ ಹೀ ಸೇವಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.  ಅಂಗಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.