ಅ.17: ಬೆಳ್ತಂಗಡಿ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದೇಶದ ಹೆಮ್ಮೆಯ ಮಾಜಿ ರಾಷ್ಟಪತಿ, ವಿಜ್ಞಾನಿ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ರವರ “ಜನ್ಮದಿನಾಚರಣೆ ಮತ್ತು ಸಂಸ್ಮರಣೆ” ಕಾರ್ಯಕ್ರಮದ ಪ್ರಯುಕ್ತ ಬೆಳ್ತಂಗಡಿ ಬಿಜೆಪಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಹಾಗೂ ಮಂಗಳೂರು ದೇರಳಕಟ್ಟೆ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಅ. 17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ  ಜರುಗಲಿದೆ.

ಅಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ”ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಮತ್ತು ಸಂಸ್ಮರಣೆ” ಕಾರ್ಯಕ್ರಮದಲ್ಲಿ ಸಾರ್ವಜನಿಕರೆಲ್ಲರೂ ಭಾಗವಹಿಸಿ, ಈ ಸಾಮಾಜಿಕ ಸೇವಾ ಕಾರ್ಯದಲ್ಲಿ ಕೈ ಜೋಡಿಸಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವಕ್ಕೆ ಉಸಿರಾಗಲು ಕಾರಣೀಕರ್ತರಾಗಿ ಸಹಕರಿಸಬೇಕೆಂದು ಬೆಳ್ತಂಗಡಿ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪತ್ರಿಕಾ  ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.