ಆರಂಬೋಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ಆರಂಬೋಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳ್ತಂಗಡಿ, ಗ್ರಾಮ ಪಂಚಾಯತ್ ಆರಂಬೋಡಿ ಹಾಗೂ ವಿವಿದ ಸಂಘ ಸಂಸ್ಥೆಗಳು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ‘ಸ್ವಚ್ಚತಾ ಹಿ ಸೇವಾ’ ಅಭಿಯಾನದ ಪ್ರಯುಕ್ತ ಆರಂಬೋಡಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ  ನಡೆಯಿತು.

ಗ್ರಾ.ಪಂ ಅಧ್ಯಕ್ಷೆ ವಿಜಯ ರಮೇಶ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರ‍ಾ.ಪಂ. ಸದಸ್ಯರುಗಳು, ಸಂಘ ಸಂಸ್ಥೆಗಳಾದ  ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಹೊಕ್ಕಾಡಿಗೋಳಿ ಹಾಗೂ ಆರಂಬೋಡಿ ಒಕ್ಕೂಟ, ರೋ‍ಟರಿ ಕ್ಲಬ್ ಲೋರೆಟಾ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಘುಣಿ, ಶ್ರೀ ಗಣೇಶೋತ್ಸವ ಸಮಿತಿ ಹನ್ನೆರಡುಕವಲು, ಶ್ರೀ ಮಂಜುನಾಥೇಶ್ವರ ಭಜನಾ ಸಮಿತಿ ಪಾಣೀಮೇರು, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹನ್ನೆರಡು ಕವಲು ಕೃಷ್ಣ ಕ್ರಷರ್ ಸಂಸ್ಥೆಯ ವ್ಯವಸ್ಥಾಪಕರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಗ್ರಾ.ಪಂ ಸಿಬ್ಬಂದಿವರ್ಗದವರು  ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.