ನಾವೂರು ಗ್ರಾ.ಪಂ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಮತ್ತು ನೈರ್ಮಲ್ಯೀಕರಣ ಕಿಟ್ ವಿತರಣೆ

ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕೊಡಮಾಡಿದ ಇಮ್ಯೂನಿಟಿ ಬೂಸ್ಟರ್ ಕಿಟ್ , ಸುರಕ್ಷಾ ಮತ್ತು ನೈರ್ಮಲ್ಯೀಕರಣದ ಕಿಟ್ ವಿತರಣಾ ಕಾರ್ಯಕ್ರಮ ಅ.18 ರಂದು ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನಾವೂರು ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸುನಂದ, ಗ್ರಾ.ಪಂ. ಸರ್ವಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ ವೆಂಕಟಕೃಷ್ಣರಾಜ , ಕಾರ್ಯದರ್ಶಿ ಹಾಗೂ ಸಿಬ್ಬಂದಿ  ವರ್ಗದವರು, ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಒಟ್ಟು 85 ಮಂದಿ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.