ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳ್ತಂಗಡಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ,ತಾಲೂಕು ಪಂಚಾಯತ್ , ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮವು ಅ.20 ರಂದು  ತಾಲೂಕು ಮಿನಿವಿಧಾನ ಸೌಧದ ಸಭಾಂಗಣದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ರವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಬಳಿ ದೀಪ ಪ್ರಜ್ವಲಿಸಿ, ಪುಷ್ಪಾರ್ಚಣೆ ಸಲ್ಲಿಸಿದರು. ಮುಖ್ಯಭಾಷಣಕಾರರಾಗಿ  ಉಪನ್ಯಾಸಕ ಚಂದ್ರಶೇಖರ್ ಗೌಡ ಕೆ  ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಮಹೇಶ್ ಜೆ., ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪ.ಪಂ ಮುಖ್ಯಾಧಿಕಾರಿ ಸುಧಾಕರ್, ಪ.ಪಂ ಸದಸ್ಯರು,  ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರು, ತಾಲೂಕಿನ ಪ.ಜಾತಿ ಮತ್ತು ಪ.ಪಂಗಡದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು  ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.