ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ‘ಗೋಪಿಕಾ’ ಉದ್ಘಾಟನೆ

ನೆರಿಯ: ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ‘ಗೋಪಿಕಾ’ ಮತ್ತು ಸಾಂಧ್ರ ಶೀತಲೀಕರಣ ಘಟಕದ ಉದ್ಘಾಟನಾ ಸಮಾರಂಭವು ಅ.20 ರಂದು ಸಂಘದ ವಠಾರದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ರವರು ಸಾಂಧ್ರ ಶೀತಲೀಕರಣ ಘಟಕವನ್ನು ಹಾಗೂ  ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ನೂತನ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ನಾಮಫಲಕ ಅನಾವರಣಗೊಳಿಸಿದರು.

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗೋಪಾಕೃಷ್ಣ ಪಿ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ,ಸವಿತಾ ಎನ್ ಶೆಟ್ಟಿ,  ದ.ಕ ಹಾಲು ಒಕ್ಕೂಟದ ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ, ಗಂಡಿಬಾಗಿಲು ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ , ನೆರಿಯ ಗ್ರಾ.ಪಂ ಅಧ್ಯಕ್ಷೆ ವಸಂತಿ, ಬೆಳ್ತಂಗಡಿ ಪಶುಸಂಗೋಪಣಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಮಂಜುನಾಯ್ಕ ಗೌರವ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪನಾಧ್ಯಕ್ಷ ಕೆ.ವಿ ಜೋರ್ಜ್, ಮಾಜಿ ಅಧ್ಯಕ್ಷರುಗಳಾದ ನಂದಕುಮಾರ್ ಎ, ಗೋಪಾಲಕೃಷ್ಣ ಗೌಡ, ಕೆ.ರಾಮಕೃಷ್ಣಗೌಡ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಗೌಡ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಮಹಮ್ಮದ್ ಶರೀಪ್, ಬೆಳ್ತಂಗಡಿ ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಆದಿತ್ಯ ಸಿ, ಬೆಳ್ತಂಗಡಿ ಪಶುವೈದ್ಯಾಧಿಕಾರಿ ಡಾ| ಗಣಪತಿ ಬಿ.ಎಂ, ಹಾಗೂ ಸಂಘದ ಸರ್ವ ಸದಸ್ಯರು, ಸಿಬ್ಬಂದಿವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದು ಸಹಕರಿಸಿದರು.

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗೋಪಾಕೃಷ್ಣ ಪಿ.ಕೆ ಸ್ವಾಗತಿಸಿ, ಎಂ ಹರೀಶ್ ನೆರಿಯ ಕಾರ್ಯಕ್ರಮ ನಿರೂಪಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.