ಚೈಲ್ಡ್ ಫಂಡ್ ಮಕ್ಕಳ ಅಭಿವೃದ್ಧಿ ಸಂಸ್ಥೆಯಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಉಪಕರಣ ಹಸ್ತಾಂತರ

ಬೆಳ್ತಂಗಡಿ : ಕೊರೋನಾ ವಿರುದ್ದ ಹೋರಾಟದಲ್ಲಿ ವೈದ್ಯರು ಮತ್ತು ಅವರ ತಂಡ, ಆಶಾ, ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಇತರ ಸರಕಾರಿ ಇಲಾಖೆಗಳು, ಸಂಘ ಸಂಸ್ಥೆಗಳು ನಿಸ್ವಾರ್ಥ ಸೇವೆ ಮಾಡಿದ್ದಾರೆ. ದೇಶದಲ್ಲಿ ಸುಮಾರು 100 ಕೋಟಿ ಜನರಿಗೆ ಪ್ರದಾನಿ ನರೇಂದ್ರ ಮೋದಿ ಸರಕಾರ ಉಚಿತ ಲಸಿಕೆ ನೀಡಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಶೇ. 95 ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ. ಜಗತ್ತಿನಲ್ಲೇ ಉಚಿತ ಲಸಿಕೆ ನೀಡಿದ ದೇಶ ಭಾರತವಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಅ.20 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚೈಲ್ಡ್ ಫಂಡ್ ಮಕ್ಕಳ ಅಭಿವೃದ್ಧಿ ಸಂಸ್ಥೆಯಿಂದ ನೀಡಲಾದ ಬೆಳ್ತಂಗಡಿ ಸುಮಾರು ೩.೫೦ ಲಕ್ಷ ರೂ. ವೆಚ್ಚದ ಉಪಕರಣ ಹಸ್ತಾಂತರಿಸಿ ಮಾತನಾಡಿದರು.

ಚೈಲ್ಡ್ ಫಂಡ್ ಮಕ್ಕಳ ಅಭಿವೃದ್ಧಿ ಸಂಸ್ಥೆಯಿಂದ ನಮ್ಮ ಸರಕಾರಿ ಆಸ್ಪತ್ರೆಗೆ ಸುಮಾರು ೩.೫೦ ಲಕ್ಷದ ವೈದ್ಯಕೀಯ ಉಪಕರಣಗಳನ್ನು ನೀಡಿದ್ದಾರೆ. ಅಲ್ಲದೆ ಆಶಾ, ಆರೋಗ್ಯ ಸಹಾಯಕಿಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಪರಿಕರಗಳನ್ನು ನೀಡಿರುವುದು ಅಭಿನಂದನಾರ್ಹ. ಜೊತೆಗೆ ಆಸ್ಪತ್ರೆಗೆ ಸಹಕಾರ ನೀಡಿರುವ ಇತರ ಸಂಘ ಸಂಸ್ಥೆಗಳಿಗೂ ಕೃತಜ್ಞತೆ ಸಲ್ಲಿಸಿದರು.

ಚೈಲ್ಡ್ ಫಂಡ್ ಮಕ್ಕಳ ಅಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅನೋಜ್ ಮಾತನಾಡಿ, ಚೈಲ್ಡ್ ಫಂಡ್ ಮಕ್ಕಳ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ದ.ಕ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಉಪಕರಣಗಳನ್ನು ನೀಡುತ್ತಿದ್ದು, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸುಮಾರು 3.50 ಲಕ್ಷ ರೂ. ವೆಚ್ಚದ ಉಪಕರಣ ವಿತರಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದಾಧಿಕಾರಿ ಡಾ|ವಿದ್ಯಾವತಿ, ಡಾ| ಆಶಾಲತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಆಸ್ಪತ್ರೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 246 ಮಂದಿ ಆಶಾ ಕಾರ್ಯಕರ್ತೆಯರು, 57 ಮಂದಿ ಕಿರಿಯ ಆರೋಗ್ಯ ಸಹಾಯಕಿಯರು ಹಾಗೂ 324 ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಪರಿಕರಗಳನ್ನು ವಿತರಿಸಲಾಯಿತು.
ಬೆಳ್ತಂಗಡಿ ಆರೋಗ್ಯ ಇಲಾಖೆಯ ತಾಲೂಕು ಕಾರ್ಯಕ್ರಮ ಸಂಯೋಜಕ ಅಜಯ್ ಕಲ್ಲೇಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.