ಲಾಯಿಲ: ನವಜೀವನ ಸಮಿತಿಯ ಸ್ವಯಂ ಸೇವಕರ ಕಾರ್ಯಗಾರ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ , ಗುರುವಾಯನಕೆರೆ ಮತ್ತು ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ. ಇದರ ಸಂಯೋಜನೆಯಲ್ಲಿ ಬೆಳ್ತಂಗಡಿ ತಾಲೂಕು ನವಜೀವನ ಸಮಿತಿ ಬಲವರ್ಧನೆಗಾಗಿ ನವಜೀವನ ಸಮಿತಿಯ ಸ್ವಯಂಸೇವಕರ ಕಾರ್ಯಾಗಾರ ಲಾಯಿಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿದರು. ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್ ನವಜೀವನ ಸಮಿತಿಗಳ ಪಾಲನೆಯ ಬಗ್ಗೆ ತಿಳಿಸಿ ಕೊಟ್ಟರು.

21 ಜನ ಸ್ವಯಂಸೇವಕರು ತರಬೇತಿಯಲ್ಲಿ ಭಾಗವಹಿಸಿದ್ದು ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಮತ್ತು ಜನಜಾಗೃತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ದಿವಾಕರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.