ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಮುಂಡ್ರುಪ್ಪಾಡಿ ಕೂಟದಕಲ್ಲು  ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿರುವ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.21 ರಂದು ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ರವರ ವಾಹನ ಚಾಲಕರಾಗಿದ್ದ ಮೋಹನ್ ರವರ ಪತ್ನಿ ಸೌಮ್ಯ(29.ವ) ಎಂಬವರೇ  ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಇಂದು ಮಧ್ಯಾಹ್ನ  ಮನೆಯಲ್ಲಿ ಯಾರೂ ಇಲ್ಲದ ವೇಳೆ  ಈಕೆ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.  ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

 

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.