ಕೊಕ್ಕಡ: ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಭಾರತ ದೇಶದಾದ್ಯಂತ  100 ಕೋಟಿಗೂ ಅಧಿಕ ಜನರಿಗೆ ಉಚಿತ ಕೋವಿಡ್ ವ್ಯಾಕ್ಸಿನೇಷನ್‌ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಹಾಗೂ ಕೊಕ್ಕಡ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಲ್ಲಿ ಶ್ರಮಿಸಿದ ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ ಕೊಕ್ಕಡ ಸಮುದಾಯ ಆಸ್ಪತ್ರೆಯಲ್ಲಿ ಜರುಗಿತು.

ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದರು. ಬೆಳ್ತಂಗಡಿ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಕೊಕ್ಕಡ ಸಿ.ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಭಿನಂದನಾ ಭಾಷಣ ಮಾಡಿದರು.

ಕೊಕ್ಕಡ ಸಮುದಾಯ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪೂಜಾ ,ನಿಡ್ಲೆ  ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ  ಅಧ್ಯಕ್ಷ  ಜನಾರ್ದನ ಕೆ‌.ಪಿ, ವ್ಯಾಕ್ಸಿನೇಷನ್ ನಿಡ್ಲೆ ವಿಭಾಗ ಪ್ರಮುಖ್ ಗಿರೀಶ್ ನಿಡ್ಲೆ ಹಾಗೂ ಪಟ್ರಮೆ ಪಂಚಾಯತ್ ಉಪಾಧ್ಯಕ್ಷ ಯತೀಶ್, ಕೊಕ್ಕಡ-ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕೊರೊನಾ ವಾರಿಯರ್ ಗಳು  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೋವಿಡ್ ಲಸಿಕೆ ನೀಡುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ 53 ಮಂದಿ ಕೊರೊನಾ ವಾರಿಯರ್ ಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.  ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷೆ ಪವಿತ್ರ ಸ್ವಾಗತಿಸಿ, ಕೇಶವ ಹಲ್ಲಿಂಗೇರಿ ಕಾರ್ಯಕ್ರಮ ನಿರೂಪಿಸಿ, ಸದಸ್ಯೆ ಲತಾ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.