ಶಿಶಿಲ ಹಿ.ಪ್ರಾ. ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

ಶಿಶಿಲ: ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿಯ ರಚನೆ ಹಾಗೂ ಅವಧಿ ಪೂರ್ಣಗೊಂಡ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರಿಗೆ  ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಭವನದಲ್ಲಿ ಜರುಗಿತು.

ಈ ಹಿಂದೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದ ತನಿಯಪ್ಪ ಹಾಗೂ ಉಪಾಧ್ಯಕ್ಷೆ ಶ್ಯಾಮಲ ಇವರಿಗೆ ಶಿಶಿಲ ಗ್ರಾ.ಪಂ. ಅಧ್ಯಕ್ಷ ಸಂದೀಪ್ ಗೌಡರವರು  ಶಾಲು ಹೊದಿಸಿ, ಸನ್ಮಾನಿಸಿ ಬೀಳ್ಕೊಡಲಾಯಿತು. ಬಳಿಕ ನೂತನ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಗಾಯತ್ರಿ ರಾಧಾಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ತಾರ ಚಿಪ್ಳೂಣ್ ಕರ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾ.ಪಂ. ಅಧ್ಯಕ್ಷ ಸಂದೀಪ್ ಗೌಡ, ಸದಸ್ಯೆ ಲಲಿತಾ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಶಾಲಾ ಮುಖ್ಯಶಿಕ್ಷಕಿ  ರತ್ನ ಹಾಗೂ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.