ಕೊಕ್ಕಡದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ಕೊಕ್ಕಡ: ಉಪ್ಪಿನಂಗಡಿ ಹವ್ಯಕ ಮಂಡಲ ಉಜಿರೆ ವಲಯ ನೇತೃತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಅ.24 ರಂದು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ವಠಾರದಲ್ಲಿ ಜರುಗಿತು.

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಧನ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ಹಾಗೂ ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಡಾ|ರಾಮಚಂದ್ರ ಭಟ್,   ಬೆಳ್ತಂಗಡಿ ವಿಪ್ರ ಪಾಕಶಾಸ್ತ್ರ ಸಂಘದ ಅಧ್ಯಕ್ಷ  ಮುಕುಂದ ದೇವಧರ್, ಕರ್ನಾಟಕ ಪತ್ರಕರ್ತರ ಸಂಘದ ಬೆಳ್ತಂಗಡಿ ಅಧ್ಯಕ್ಷ ವೆಂಕಟೇಶ ಬೆಂಡೆ, ಉಪ್ಪಿನಂಗಡಿ ಹವ್ಯಕ ಮಂಡಲದ ಅಧ್ಯಕ್ಷ ಹೇರಂಬ ಶಾಸ್ತ್ರಿ,  ಕೊಕ್ಕಡ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಚಂದ್ರಶೇಖರ ಕಡೀರ , ವಿವಿಧ ಸಂಘ ಸಂಸ್ಥೆಗಳ ಪ್ರಮುಖರು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೊಕ್ಕಡ ಅಂಬಿಕಾ ಕ್ಲಿನಿಕ್ ನ ಡಾ|ಗಣೇಶ್ ಪ್ರಸಾದ್, ಹವ್ಯಕ ವಲಯ ಉಜಿರೆ ಮಹಾಬಲೇಶ್ವರ ಭಟ್ ಕುದುಪ್ಪುಲ ಕಾರ್ಯಕ್ರಮವನ್ನು ಸಂಯೋಜಿಸಿದರು. ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.