ಓಡಿಲ್ನಾಳ ಹಿ.ಪ್ರಾ ಶಾಲೆಯಲ್ಲಿ 1 ರಿಂದ 5 ನೇ ತರಗತಿಗಳ ಪ್ರಾರಂಭೋತ್ಸವ

ಓಡಿಲ್ನಾಳ: ಕೊರೊನಾ ಮಹಾಮಾರಿಯಿಂದಾಗಿ ಕಳೆದ ಒಂದು ವರ್ಷ ಎಂಟು ತಿಂಗಳ ಬಳಿಕ ರಾಜ್ಯದಲ್ಲಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಅ.25ರಿಂದ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರಕಾರ ಅನುಮತಿ ನೀಡಿದ್ದು, ಈ ಪ್ರಯುಕ್ತ ಓಡಿಲ್ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5 ನೇ ತರಗತಿಗಳ ಪ್ರಾರಂಭೋತ್ಸವವು ಇಂದು(ಅ.25) ಜರುಗಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರುದೇಶ್ ಕುಮಾರ್ ರವರು ದೀಪ ಪ್ರಜ್ವಲಿಸಿ, ಶಾಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಶಾಲೆಯ ಶಿಕ್ಷಕಿಯರು ಎಲ್ಲಾ ವಿದ್ಯಾರ್ಥಿಗಳಿಗೆ ಆರತಿಯನ್ನು ಬೆಳಗಿ, ಬಣ್ಣ ಬಣ್ಣದ ಬಲೂನ್ ಹಾಗೂ ಸಿಹಿತಿಂಡಿಯನ್ನು ನೀಡಿ  ಸಂಭ್ರಮದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ನಿರಂಜನ್,  ಶಿಕ್ಷಕ ವೃಂದದವರು, ಬಿಸಿಯೂಟ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.